ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಬಗ್ಗೆ ಬಹಿರಂಗ ಹೇಳಿಕೆ ನೀಡಬೇಡಿ: ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಹಾಗೂ ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ಯಾರು ಬಹಿರಂಗ ಹೇಳಿಕೆ ನೀಡಬಾರದು ಎಂದು ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಯಾರಿಗೆ ಯಾವ ಹುದ್ದೆ ನೀಡಬೇಕು ಎಂದು ಗೊತ್ತಿದೆ. ಹಾಗಾಗಿ ಸಚಿವ ಸಂಪುಟ ಸೇರ್ಪಡೆ ಸಂಬಂಧ ಯಾರು ದೆಹಲಿಗೆ ಬರಬಾರದು ಎಂದು ಎಚ್ಚರಿಕೆ ನೀಡಿದೆ.