ಹೈಕೋರ್ಟ್: ತೀರ್ಪು ಕಾಯ್ದಿರಿಸಿದ್ದು, ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣ
ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತು.ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಧಾರವಾಡ ಪೀಠ ತೀರ್ಪು ಕಾಯ್ದಿರಿಸಿತು. […]