ಮುರುಘಾ ಶ್ರೀಗಳ ವಿರುದ್ಧದ ಸಾಕ್ಷಿ ವಿಚಾರಣೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಡೆಸುತ್ತಿರುವ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ವಿರುದ್ಧ ನಡೆಸುತ್ತಿರುವ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಜು.1ರವರೆಗೆ ತಡೆಯಾಜ್ಞೆ ಈ […]