ಪರ್ಕಳ ಪೇಟೆಯ ಹೆದ್ದಾರಿ ಅಗಲೀಕರಣ ಕಾಮಗಾರಿ: ಕಟ್ಟಡ ತೆರವಿಗೆ ಸ್ಥಳೀಯರ ವಿರೋಧ, ಅರ್ಧಕ್ಕೆ ಸ್ಥಗಿತಗೊಂಡ ತೆರವು ಕಾರ್ಯಾಚರಣೆ
ಉಡುಪಿ: ರಾಷ್ಟ್ರೀಯ ಹೆದ್ದಾರಿ 169(ಎ) ಅಗಲೀಕರಣ ಕಾಮಗಾರಿ ಪರ್ಕಳ ಪೇಟೆಯಲ್ಲಿ ಆರಂಭವಾಗಿದ್ದು, ಇದೀಗ ಪೇಟೆಯಲ್ಲಿದ್ದ ಕಟ್ಟಡ ತೆರವು ಕಾರ್ಯಕ್ಕೆ ಇಂದು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಕಟ್ಟಡ ತೆರವು ಮಾಡುವ ಬಗ್ಗೆ ಹೆದ್ದಾರಿ ಅಧಿಕಾರಿಗಳು ಯಾವುದೇ ಮುನ್ಸೂಚನೆ ನೀಡಿಲ್ಲ. ಅಲ್ಲದೆ, ನೋಟಿಸ್ ಕೂಡ ಜಾರಿ ಮಾಡಿಲ್ಲ. ಏಕಾಏಕಿಯಾಗಿ ತೆರವು ಕಾರ್ಯ ಆರಂಭಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಮಣಿಪಾಲ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಆಗಮಿಸಿ […]