ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ಆಳವಾಗಿ ಪರಿಶೀಲಿಸಿದ ನಂತರ ನಿರ್ಧಾರವೆಂದ ಗೃಹ ಸಚಿವ

ಬೆಂಗಳೂರು: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ನಿರ್ಧಾರವನ್ನು ವಾಪಸ್ ಪಡೆಯುವ ಬಗ್ಗೆ ಹೇಳಿಕೆಗಳು ದಿನೇ ದಿನೇ ಕಾವೇರುತ್ತಿದ್ದು ಪ್ರತಿಪಕ್ಷ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಹಿನ್ನೆಲೆಯಲ್ಲಿ ವಿಷಯವನ್ನು ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಹಿಜಾಬ್ ಬಗ್ಗೆ ನಾವು ಯಾವುದೇ ಆದೇಶ ನೀಡಿಲ್ಲ, ಒಂದು ವೇಳೆ ಮಾಡಿದ್ದರೂ ಪರಿಶೀಲಿಸುತ್ತೇವೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಇದನ್ನು ಆಳವಾಗಿ ಪರಿಶೀಲಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು […]