ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ; ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವಂತಿಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಮಹತ್ವದ ತೀರ್ಪು

ಬೆಂಗಳೂರು: ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಮನವಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಹಿಜಾಬ್ ಗೆ  ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಪೀಠ ವಜಾ ಮಾಡಿದೆ. ಈ ಬಗ್ಗೆ ಕಾಯ್ದಿರಿಸಲಾಗಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಇಂದು ಪ್ರಕಟಿಸಿತು. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ, ಸರಕಾರದ […]