ಯಶ್ ಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆ ಒಡ್ದಿದ ಪ್ರಕರಣ: ಎರಡನೇ ಆರೋಪಿಯೂ ಪೊಲೀಸ್ ಬಲೆಗೆ
ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಾಪು ಪೊಲೀಸರು ಜೂ. 22ರಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಬಜ್ಪೆ ನಿವಾಸಿ ಮಹಮ್ಮದ್ ಆಸಿಫ್ (32) ಬಂಧಿತ ಆರೋಪಿ. ಕಳೆದ ವರ್ಷ ಶಾಲೆಗಳಲ್ಲಿ ಹಿಜಾಬ್ ನಿಷೇಧ ಕುರಿತು ವಿವಾದವಾಗಿದ್ದ ಸಂದರ್ಭದಲ್ಲಿ ಯಶ್ ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಜೀವ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಆರೋಪಿಗಳನ್ನು ಬಂಧಿಸುವಂತೆ ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು […]