ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ: ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ 15ರ ವರೆಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಶಾಲಾ- ಕಾಲೇಜುಗಳಲ್ಲಿ ಭುಗಿಲೆದ್ದಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ಮಂಗಳವಾರದವರೆಗೂ ರಜೆ ಮುಂದುವರೆಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿಜಾಬ್ ವಿಚಾರದ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ಎಲ್ಲಾ ಪಿಯು ಕಾಲೇಜುಗಳಿಗೆ ಫೆ.15 ರ ವರೆಗೂ ರಜೆ ಘೋಷಿಸಲಾಗಿದೆ.