ಹಿಜಾಬ್- ಕೇಸರಿ ಶಾಲು ವಿವಾದ; ನಾಳೆಯಿಂದ (ಫೆ.9) ಮೂರು ದಿನ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದ ತಾರಕಕ್ಕೇರಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಳೆಯಿಂದ (ಫೆ.9) ಮೂರು ದಿನಗಳ ಕಾಲ ಹೈಸ್ಕೂಲ್, ಪಿಯುಸಿ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಶಾಲಾ ಕಾಲೇಜುಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಜೆ ಘೋಷಣೆ ಮಾಡಲಾಗಿದೆ ಎಂದರು.