ಇಂದಿನಿಂದ ಪ್ರಾಯೋಗಿಕ ಪರೀಕ್ಷೆಗಳು ಶುರು; ಹಾಜರಾಗದವರಿಗೆ ಮರುಪರೀಕ್ಷೆಯೂ ಇಲ್ಲ, ಅಂಕವೂ ಇಲ್ಲ

ಬೆಂಗಳೂರು: ಹಿಜಬ್ ಧರಿಸುವ ಕುರಿತು ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದ್ದರೂ ಅದಕ್ಕೆ ಸೊಪ್ಪು ಹಾಕದೆ ಹಿಜಬ್ ಗಾಗಿ ಪಟ್ಟು ಹಿಡಿದು ಕುಳಿತುಬಿಟ್ಟರೆ ಅಂತಹ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗುವ ಅವಕಾಶವನ್ನು ಕಳೆದುಕೊಳ್ಳಲಿರುವುದು ನಿಶ್ಚಿತ. ಫೆ. 21, ಸೋಮವಾರದಿಂದಲೇ ಪ್ರಾಯೋಗಿಕ ಪರೀಕ್ಷೆಗಳು ಶುರುವಾಗಲಿದ್ದು, ಹಿಜಬ್ ಗಾಗಿ ಪಟ್ಟು ಹಿಡಿದಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಒಂದು ವೇಳೆ ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗದಿದ್ದಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. […]

ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಸರ್ವ ಧರ್ಮ ಮುಖಂಡರಿಂದ ಮನವಿ

  ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲದ ಮಧ್ಯೆ, ಶನಿವಾರ ವಿವಿಧ ಧರ್ಮಗಳ ಪ್ರಮುಖ ಧಾರ್ಮಿಕ ಮುಖಂಡರು ಸಾಮರಸ್ಯ ಮತ್ತು ಶಾಂತಿಯಿಂದ ಬದುಕುವಂತೆ ಜನರಲ್ಲಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಅನೌಪಚಾರಿಕ ಸಭೆ ನಡೆಸಿದ ಸರ್ವ ಧರ್ಮಗಳ ಧಾರ್ಮಿಕ ಮುಖಂಡರು, ಹಿಂದೆಂದಿಗಿಂತಲೂ ಸಮಾಜಕ್ಕೆ ಈಗ ಶಾಂತಿಯ ಅಗತ್ಯ ಹೆಚ್ಚಿದೆ ಎಂದರು. ಚಿತ್ರದುರ್ಗ ಮಠದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, “ಈ ಹಿಜಾಬ್ ವಿವಾದವು ರಾಜ್ಯದ ಜಾತ್ಯತೀತ ರಚನೆಗೆ ಅಡ್ಡಿಪಡಿಸುವ ಮಾನವ ನಿರ್ಮಿತ ಸಂಘರ್ಷವಾಗಿದೆ. ಡ್ರೆಸ್ ಕೋಡ್ ವಿವಾದವು ರಾಜ್ಯಾದ್ಯಂತ […]