ಅಸ್ಸಾಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಆಯ್ಕೆ

ಗುವಾಹಟಿ: ಅಸ್ಸಾಂ ರಾಜ್ಯದ ಮುಖ್ಯಮಂತ್ರಿ‌ ಯಾರಾಗುತ್ತಾರೆಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಹಾಲಿ ಸಿಎಂ ಸರ್ಬಾನಂದ ಸೊನೊವಾಲ್ ಹಾಗೂ‌ ಹಿಮಂತ ಬಿಸ್ವ ಶರ್ಮಾ ನಡುವೆ ಸಿಎಂ ಹುದ್ದೆಗೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಹಿಮಂತ ಬಿಸ್ವಾ ಶರ್ಮಾ (52) ಅವರನ್ನು ಅಸ್ಸಾಂನ ನೂತನ ಮುಖ್ಯಮಂತ್ರಿಯನ್ನಾಗಿ‌ ಘೋಷಿಸಿದೆ. ಹಿಮಂತ ಬಿಸ್ವ ಶರ್ಮಾ ಇಂದು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2015ರ ವರೆಗೂ ಕಾಂಗ್ರೆಸ್‌ನಲ್ಲಿದ್ದ ಶರ್ಮಾ, ಅನಂತರ ಬಿಜೆಪಿಗೆ ಸೇರ್ಪಡೆಯಾದರು. ಅವರೊಂದಿಗೆ ಕಾಂಗ್ರೆಸ್‌ನ ಹಲವು ಶಾಸಕರು […]