ಬ್ಯಾಂಕ್ ಆಫ್ ಬರೋಡಾ ವತಿಯಿಂದ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಕಾರ್ಯಕ್ರಮ

ಮಂಗಳೂರು: ಬ್ಯಾಂಕ್ ಆಫ್ ಬರೋಡಾ, ವಲಯ ಕಛೇರಿ, ಮಂಗಳೂರು ಮತ್ತು ಬೆಸಂಟ್ ಮಹಿಳಾ ಕಾಲೇಜು ಕೊಡಿಯಾಲ್ ಬೈಲ್, ಮಂಗಳೂರು ವತಿಯಿಂದ ಜಂಟಿಯಾಗಿ ಅಂತರ ಕಾಲೇಜು ಹಿಂದಿ ಸಂಗೋಷ್ಠಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಮಂಗಳೂರಿನ ಸ್ಥಳೀಯ ಕಾಲೇಜು, ಉಡುಪಿ ಮತ್ತು ಸುಳ್ಯ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತೃಭಾಷೆಯ ಮಹತ್ವದ ಬಗ್ಗೆ ವಿಮರ್ಶಿಸಿ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸಿದರು. ಬೆಸೆಂಟ್ ಮಹಿಳಾ ಕಾಲೇಜ್ ಪ್ರಾಂಶುಪಾಲ ಡಾ. ಪ್ರವೀಣ ಕುಮಾರ್ ಕೆ […]

ಜಿ.ಶಂಕರ್ ಕಾಲೇಜಿನಲ್ಲಿ ಹಿಂದಿ ಭಾಷೆಯ ಪ್ರಾಮುಖ್ಯತೆ ಹಾಗೂ ಪ್ರಯೋಜನ ಕುರಿತು ವಿಶೇಷ ಉಪನ್ಯಾಸ

ಉಡುಪಿ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಹಿಂದಿ ವಿಭಾಗದ ವತಿಯಿಂದ ಹಿಂದಿ ಭಾಷೆಯ ಪ್ರಾಮುಖ್ಯತೆ ಮತ್ತು ಪ್ರಯೋಜನಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಪಿ.ಜಿ ಎ.ವಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ, ಡಾ. ಸುಕನ್ಯಾ ಮೇರಿ ಜೆ, ಹಿಂದಿ ಭಾಷೆ ಕಲಿಯುವುದರಿಂದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ವೃತ್ತಿಯನ್ನು ಪಡೆದುಕೊಳ್ಳಲು ಸಾಧ್ಯ. ಬ್ಯಾಂಕ್, ರೈಲ್ವೆ, ದೂರ […]

ಅಜಯ್ ದೇವಗನ್ v/s ಕಿಚ್ಚ ಸುದೀಪ್ ಭಾಷಾ ಯುದ್ದ: ಭಾಷಾ ವಿಭಜನೆ ಬೇಡ ಎಂದ ಸೋನು ನಿಗಮ್

ಹೊಸದಿಲ್ಲಿ: ರಾಷ್ಟ್ರ ಭಾಷೆಯಾಗಿ ಹಿಂದಿ ವಿವಾದದ ನಡುವೆಯೇ ಈ ವಿಷಯದ ಬಗ್ಗೆ ಗಾಯಕ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋನು ನಿಗಮ್‌ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬೀಸ್ಟ್ ಸ್ಟೂಡಿಯೋಸ್ ನ ಸ್ಥಾಪಕ ಮತ್ತು ಸಿಇಒ ಸುಶಾಂತ್ ಮೆಹ್ತಾ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಕಾರ್ಯಕ್ರಮದ ಕುರಿತು ಪ್ರತಿಕ್ರಿಯಿಸಲು ಕೇಳಿದಾಗ, ಗಾಯಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಸೋನು ನಿಗಮ್, “ನನ್ನ ಜ್ಞಾನದ ಪ್ರಕಾರ, ಭಾರತದ ಸಂವಿಧಾನದಲ್ಲಿ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಬರೆಯಲಾಗಿಲ್ಲ, ನಾನು ಈ ಬಗ್ಗೆ ತಜ್ಞರೊಂದಿಗೆ ಸಮಾಲೋಚಿಸಿದ್ದೇನೆ. ಹಿಂದಿ […]