ಶಿವಮೊಗ್ಗ: ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ; ಮೂವರ ಬಂಧನ
ಶಿವಮೊಗ್ಗ: ಕೆಲವು ತಿಂಗಳುಗಳ ಹಿಂದೆ ಹಿಂದೂ ಕಾರ್ಯಕರ್ತ ಹರ್ಷನ ಕ್ರೂರ ಹತ್ಯೆಗೆ ಸಾಕ್ಷಿಯಾದ ಶಿವಮೊಗ್ಗದಲ್ಲಿ ಮತ್ತೊಮ್ಮೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. 25 ವರ್ಷದ ಪ್ರಕಾಶ್ ಎಂಬ ಯುವಕನ ಮೇಲೆ ಸೋಮವಾರ ದುಷ್ಕರ್ಮಿಗಳು ಆರ್‌ಎಸ್‌ಎಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದಾಗ ಪ್ರಕಾಶ್ ತಮ್ಮ ಮನೆ ಮುಂದೆ ನಿಂತಿದ್ದರು. ಹಲ್ಲೆಗೊಳಗಾದ ಪ್ರಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾನು ವೀರ ಸಾವರ್ಕರ್ ಬಗ್ಗೆ ಆಯೋಜಿಸಲಾಗಿದ್ದ ಹಿಂದೂ ಸಂಘಟನೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ, ಆ ಬಳಿಕ […]