ಹಿಂದೂ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಡಾ.ತ್ರಿವೇಣಿ ವೇಣುಗೋಪಾಲ್ ಪುನರಾಯ್ಕೆ

ಉದ್ಯಾವರ : 162 ವರ್ಷದ ಹಿರಿಯ ಶಿಕ್ಷಣ ಸಂಸ್ಥೆ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಮಹಾಸಭೆಯು ಇತ್ತೀಚಿಗೆ ಜರುಗಿ 2022- 2023 ಸಾಲಿಗೆ ಅಧ್ಯಕ್ಷರಾಗಿ ಡಾ. ತ್ರಿವೇಣಿ ವೇಣುಗೋಪಾಲ್ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಶ್ರೀಮತಿ ರಾಜೀವಿ ಉಮೇಶ್ ಕರ್ಕೇರ, ಕಾರ್ಯದರ್ಶಿಗಳಾಗಿ ಶ್ರೀಮತಿ ಅಶ್ವಿನಿ ದೇವೇಂದ್ರ , ಜತೆಕಾರ್ಯದರ್ಶಿಗಳಾಗಿ ಶ್ರೀಮತಿ ಜ್ಯೋತಿ ರವೀಂದ್ರ ಶೆಟ್ಟಿ ,ಕೋಶಾಧಿಕಾರಿಗಳಾಗಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಬದಲಾದ ಸನ್ನಿವೇಶದಲ್ಲಿ ವಿದ್ಯಾರ್ಥಿಗಳ ಮನಸ್ಥಿತಿಗೆ ಅನುಗುಣವಾಗಿ ಶಿಕ್ಷಕರು ಮತ್ತು ಹೆತ್ತವರು ಬದಲಾಗಬೇಕು- ಡಾ. ನಿಕೇತನ

ಉದ್ಯಾವರ: ಇಂದಿನ ಆಧುನಿಕ ಕಾಲದಲ್ಲಿ ಮಕ್ಕಳ ಮನಸ್ಥಿತಿ ಬದಲಾಗಿದೆ. ಅದರಲ್ಲೂ ಕೋವಿಡ್ – 19 ರಿಂದಾಗಿ ಮಕ್ಕಳು ತಂತ್ರಜ್ಞಾನಕ್ಕೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಜಗತ್ತೇ ಒಂದು ಹಳ್ಳಿಯಾಗಿರುವ ಜಾಗತೀಕರಣದ ಸಂದರ್ಭದಲ್ಲಿ ಮಕ್ಕಳ ಮನಸ್ಥಿತಿಯು ಅದಕ್ಕೆ ಅನುಗುಣವಾಗಿ ಬೆಳೆಯುತ್ತಿದೆ. ಈ ಸನ್ನಿವೇಶದಲ್ಲಿ ಶಿಕ್ಷಕರು ಮತ್ತು ಹೆತ್ತವರು ಕೂಡಾ ತಮ್ಮ ಮನೋಭಾವವನ್ನು ನವೀಕರಿಸಿಕೊಳ್ಳ ಬೇಕಾಗಿದೆ. ಇಲ್ಲವಾದಲ್ಲಿ ಮಕ್ಕಳ ಮನಸ್ಥಿತಿಯೊಂದಿಗೆ ಶಿಕ್ಷಕರ ಮನಸ್ಥಿತಿ ಘರ್ಷಿಸುವ ಹಂತ ತಲುಪಿದರೆ ಇದು ಮಕ್ಕಳ ಮನಸ್ಥಿತಿಯ ಮೇಲೆ ಋಣಾತ್ಮಕ ಪರಿಣಾಮ ಬೀರಿ ಅವರ ಶಿಕ್ಷಣ ಕುಂಠಿತವಾಗುವ ಅಪಾಯವಿದೆ  […]