ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯ ಮುಂದುವರಿದರೆ ಕಾಂಗ್ರೆಸ್ ವಿರುದ್ದ ರಾಜ್ಯಾದ್ಯಂತ ಉಗ್ರ ಹೋರಾಟ: ಹಿಂಜಾವೇ ಎಚ್ಚರಿಕೆ
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ರಾಜಕಾರಣ ಮಾಡುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಗಳನ್ನು ಹಿಂಪಡೆಯುತ್ತಿರುವ ಸರಕಾರ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಅವರ ಮೇಲೆ ವಿನಾ ಕಾರಣ ಕೇಸ್ ದಾಖಲಿಸುವುದು ಮುಂತಾದವುಗಳನ್ನು ಮಾಡುತ್ತಿದೆ. ಮಾತ್ರವಲ್ಲ ಹಿಂದೂ ಸಂಘಟನೆಯ ಕೆಲಸಗಳಿಗೆ ತೊಂದರೆ ನೀಡುತ್ತಿದ್ದು ಸಿದ್ದರಾಮಯ್ಯ ಸರಕಾರ ಹಿಂದೂ ಕಾರ್ಯಕರ್ತರನ್ನು ದಮನಿಸುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ಇದೇ ರೀತಿ ದೌರ್ಜನ್ಯ ಮುಂದುವರಿದೆ ಕಾಂಗ್ರೆಸ್ […]
ಕಾರ್ಕಳ: ಆ.14 ರಂದು ಹಿಂದು ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ
ಕಾರ್ಕಳ: ಹಿಂದು ಜಾಗರಣ ವೇದಿಕೆ ಕಾರ್ಕಳ ವತಿಯಿಂದ ಹಿಂದು ಜಾಗೃತಿ- ಹಿಂದು ಸಂಘಟನೆ- ಹಿಂದು ಸುರಕ್ಷೆಗಾಗಿ “ಅಖಂಡ ಭಾರತ ಸಂಕಲ್ಪ ದಿನ” ಹಾಗೂ “ಬೃಹತ್ ಪಂಜಿನ ಮೆರವಣಿಗೆ” ಕಾರ್ಕಳ ಅನಂತ ಪದ್ಮನಾಭ ದೇವಸ್ಥಾನದಿಂದ ಹೊರಟು ಕಾರ್ಕಳ ಬಸ್ಟ್ಯಾಂಡ್, ಮೂರು ಮಾರ್ಗ, ವೆಂಕಟರಮಣ ದೇವಾಲಯದ ಮಾರ್ಗವಾಗಿ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನ ಗಾಂಧಿ ಮೈದಾನದವರೆಗೆ ನಡೆಯಲಿದೆ. ಆ.14 ಸೋಮವಾರ ದಂದು ಸಂಜೆ 6 ಗಂಟೆಗೆ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ಸಭೆಯನ್ನು ಉದ್ದೇಶಿಸಿ ಮಹೇಶ್ ಕಡಗದಾಳು (ಪ್ರಾಂತ ಸಹ ಸಂಯೋಜಕರು, ಹಿಂಜಾವೇ ಕರ್ನಾಟಕ ದಕ್ಷಿಣ) ದಿಕ್ಸೂಚಿ […]
ಕಾರಿನಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ವಿದ್ಯಾರ್ಥಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿಂಜಾವೇ ಕಾರ್ಯಕರ್ತರ ಮೇಲೆ ಕೇಸ್: ಹಿಂಜಾವೇ ಸ್ಪಷ್ಟನೆ
ಕಾರ್ಕಳ: ಕಾರಿನಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿಗಳನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರನ್ನೇ ಪೊಲೀಸರು ಬಂಧಿಸಿದ ಘಟನೆ ಭಾನುವಾರ ಕಾರ್ಕಳದಲ್ಲಿ ನಡೆದಿದೆ. ಪ್ರಕರಣದ ವಿವರ: ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಅದೇ ಕಾಲೇಜಿನ ಮಹಿಳಾ ಪ್ರೊಫೆಸರ್ ಒಂದೇ ಕಾರಿನಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿರುವ ಬಗ್ಗೆ ಹಿಂದೂ ಕಾರ್ಯಕರ್ತರಿಗೆ ಮಾಹಿತಿ ಲಭಿಸಿತ್ತು. ಕಾರನ್ನು ಹಿಂಬಾಲಿಸಿದ ಕಾರ್ಯಕರ್ತರಿಗೆ ಕಾರಿನಿಂದ ಕಿರುಚಾಟ ಕೇಳಿದ್ದು ಕಾರನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ಧಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ನೈತಿಕ […]
ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣ: ಸೂಕ್ತ ಕಾನೂನು ರಚಿಸುವಂತೆ ಗೃಹಸಚಿವರಿಗೆ ಹಿಂಜಾವೇ ಮನವಿ
ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ರೂಪಿಸುವ ಕುರಿತು ಹಿಂದುಪರ ಸಂಘಟನೆಗಳ ನಿಯೋಗವು ದೂರು ಸಲ್ಲಿಸಿ, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಸ್ಪಂದಿಸಿದ ಸಚಿವರು ಪೊಲೀಸ್ ದಳ ರಚಿಸುವ ಕುರಿತಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಜಯಮಹಲ್ ನ ಗೃಹ ಸಚಿವರ ಅಧಿಕೃತ ನಿವಾಸದಲ್ಲಿ ಹಿಂದೂ ಜಾಗರಣ ವೇದಿಕೆಯ ಸದಸ್ಯರು […]
ಶಂಕರನಾರಾಯಣ ಖಾಸಗಿ ಶಾಲೆಯ ಕ್ರೀಡೋತ್ಸವದಲ್ಲಿ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿನಿಯರಿಂದ ನಮಾಜ್: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಕುಂದಾಪುರ: ಶಂಕರನಾರಾಯಣದ ಖಾಸಗಿ ಶಾಲೆಯೊಂದು ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವನ್ನು ಆಯೋಜಿಸಿತ್ತು. ಉದ್ಘಾಟನಾ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾಗತ ನೃತ್ಯ ಪ್ರದರ್ಶಿಸಿದ್ದರು. ಕ್ರೀಡೋತ್ಸವ ಪ್ರಾರಂಭಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಸುಮಾರು 30 ಸೆಕೆಂಡ್ ಗಳ ಕಾಲ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿಗಳ ಬಳಿ ನಮಾಜ್ ಮಾಡಿಸಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಹಿಂದೂ ವಿದ್ಯಾರ್ಥಿಗಳ ಮೇಲೆ ಒತ್ತಾಯ ಪೂರ್ವಕವಾಗಿ ಇಸ್ಲಾಂ ಆಚರಣೆಗಳನ್ನು ಹೇರಿಕೆ ಮಾಡಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ಶಂಕರನಾರಾಯಣ […]