ಹಿಂದೂ ವಿವಾಹ ಕಾಯ್ದೆಯಡಿ ಅಂತರ್ ಧರ್ಮೀಯ ಜೋಡಿಯ ವಿವಾಹಗಳು ಅಸಿಂಧು: ಸುಪ್ರೀಂಕೋರ್ಟ್
ನವದೆಹಲಿ: ಹಿಂದೂ ವಿವಾಹ ಕಾಯ್ದೆಯಡಿ ಅಂತರ್ ಧರ್ಮೀಯ ಜೋಡಿಗಳ ನಡುವಿನ ಯಾವುದೇ ವಿವಾಹವು ಅಸಿಂಧು ಮತ್ತು ಹಿಂದೂಗಳು ಮಾತ್ರ ಅದೇ ಕಾನೂನಿನ ಅಡಿಯಲ್ಲಿ ಮದುವೆಯಾಗಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 2017ರ ಆಗಸ್ಟ್‌ನಲ್ಲಿ ತೆಲಂಗಾಣ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠ ಶುಕ್ರವಾರ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಫೆಬ್ರವರಿಗೆ ಮುಂದೂಡಿದೆ. ಅರ್ಜಿದಾರರು ಕ್ರಿಶ್ಚಿಯನ್ ಮತದವರಾಗಿದ್ದು, ದೂರುದಾರ ಮಹಿಳೆ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದಾರೆ. […]