ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ ವಾಪಾಸು ಕಳುಹಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಾಸು ಕಳುಹಿಸಿದ್ದಾರೆ ಎನ್ನಲಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿ ಹೇಳಿದೆ. ಹೈಕೋರ್ಟ್‌ನ ಧಾರವಾಡ ಪೀಠವು ರಿಟ್ ಅರ್ಜಿ 3440/2005ರಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ […]
ದೇವಾಲಯಗಳ ಆದಾಯದ ಮೇಲೆ ಶೇ 10 ತೆರಿಗೆ ಕಡ್ಡಾಯಗೊಳಿಸುವ ಮಸೂದೆಗೆ ರಾಜ್ಯವಿಧಾನ ಪರಿಷತ್ತಿನಲ್ಲಿ ಸೋಲು
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, 1 ಕೋಟಿ ರೂಗಿಂತ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಆದಾಯದ ಮೇಲೆ ಶೇ 10 ರಷ್ಟು ತೆರಿಗೆಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಶುಕ್ರವಾರ ಸಂಜೆ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಲಿಸಲಾಯಿತು. ರಾಜ್ಯ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಅಂಗೀಕರಿಸಿದ ಎರಡು ದಿನಗಳ ನಂತರ ವಿಧಾನಪರಿಷತ್ತಿನಲ್ಲಿ ಮಸೂದೆಗೆ ಬಹುಮತ ದೊರೆಯಲಿಲ್ಲ. ಈ ಮಸೂದೆಯು ದೇಶಾದ್ಯಂತ ಭಾರೀ ವಿವಾದವನ್ನು ಹುಟ್ಟುಹಾಕಿತ್ತು ಮತ್ತು ಕಾಂಗ್ರೆಸ್ ‘ಹಿಂದೂ ವಿರೋಧಿ’ ನೀತಿಗಳನ್ನು ಜಾರಿಗೆ ತಂದಿದೆ ಎಂದು ಪ್ರತಿಪಕ್ಷ ಬಿಜೆಪಿ […]