ಹಿಂದೂ ಧಾರ್ಮಿಕ ದತ್ತಿ ಇಲಾಖಾಧೀನ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಧಾರ್ಮಿಕ ದತ್ತಿ ಇಲಾಖೆ ಬುಧವಾರ ಈ ಸಂಬಂಧ ಸುತ್ತೋಲೆಯೊಂದನ್ನು ಹೊರಡಿಸಿದೆ. ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು […]