ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಪ್ರೆಂಟಿಶಿಪ್
ಉಡುಪಿ: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ತರಬೇತಿ ಸಂಸ್ಥೆಯ ವತಿಯಿಂದ ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಸಿ.ಓ.ಪಿ.ಎ, ಫೌಂಡ್ರಿಮ್ಯಾನ್ ಮತ್ತು ಶೀಟ್ ಮೆಟಲ್ ವರ್ಕರ್ ಟ್ರೇಡ್‌ನಲ್ಲಿ ಅಪ್ರೆಂಟಿಶಿಪ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಮಾನ್ಯತೆ ಪಡೆದ ಐ.ಟಿ.ಐ ಗಳಿಂದ ಕುಶಲಕರ್ಮಿಗಳ ತರಬೇತಿ ಯೋಜನೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಉಡುಪಿ ಮೊ.ನಂ: 9945856670, 8197440155 […]