ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಉಚಿತ ಲ್ಯಾಪ್‍ಟಾಪ್ ವಿತರಣೆ
ಉಡುಪಿ ಮಾ.16: ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ಯೋಜನೆಯಡಿ ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಕೊಡಮಾಡಿದ ಲ್ಯಾಪ್‍ಟಾಪ್‍ಗಳನ್ನು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾಪು ಶಾಸಕ ಹಾಗೂ ಅಭಿವೃಧ್ಧಿ ಸಮಿತಿಯ ಅಧ್ಯಕ್ಷ ಲಾಲಾಜಿ ಆರ್ ಮೆಂಡನ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‍ಗಳನ್ನು ಹಸ್ತಾಂತರಿಸಿ, ಲ್ಯಾಪ್ ಟಾಪ್‍ಗಳನ್ನು ಸರಿಯಾದ ರೀತಿಯಲ್ಲಿ ಬಳಸಿ ಶೈಕ್ಷಣಿಕವಾಗಿ ಉತ್ತಮ ಸಾಧನೆಯನ್ನು ಮಾಡುವಂತೆ ಪ್ರೋತ್ಸಾಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನಿಕೇತನ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಬಳಕೆಯ ಬಗ್ಗೆ ಕಾಲೇಜು ಶಿಕ್ಷಣ […]