ಹಿರಿಯಡಕ: ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕದ ಯುವ ರೆಡ್‍ಕ್ರಾಸ್ ಘಟಕ ಮತ್ತು ರೋವರ್-ರೇಂಜರ್ ಘಟಕಗಳ ವತಿಯಿಂದ ಇತ್ತೀಚೆಗೆ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ನಡೆಯಿತು. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳು ಮತ್ತು ಆರೋಗ್ಯ ಪಾಲಿ ಕ್ಲಿನಿಕ್, ನೇಜರ್, ಸಂತೆಕಟ್ಟೆ ವೈದ್ಯ ಡಾ| ಕೀರ್ತಿ ಪಾಲನ್ ಪ್ರಥಮ ಚಿಕಿತ್ಸಾ ತರಬೇತಿಯನ್ನು ನಡೆಸಿಕೊಟ್ಟರು. ಪ್ರಥಮ ಚಿಕಿತ್ಸೆ ಎಂದರೇನು? ತಿಳಿಸಿ, […]

ಫೆ. 9 ಹಿರಿಯಡ್ಕ ಕಾಲೇಜು‌, ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ  ವಿವಿಧ ಸಾಧಕರಿಗೆ ಸಮ್ಮಾನ

ಉಡುಪಿ: ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಫೆ. 9ರಂದು  ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸುಧಾಕರ್ ಶೆಟ್ಟಿ ನೆರವೇರಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ| ನಿಕೇತನ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತಿತರರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಅನಂತರ […]

ಡಾ. ಬಿ. ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾರ್ವಕಾಲಿಕ ಮಾರ್ಗದರ್ಶಿ ಸೂತ್ರಗಳಾಗಿವೆ: ಲಾಲಾಜಿ ಆರ್. ಮೆಂಡನ್

ಉಡುಪಿ: ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‍ರವರ ವಿಚಾರಧಾರೆಗಳು ಸಾರ್ವಕಾಲಿಕ ಮಾರ್ಗದರ್ಶಿ ಸೂತ್ರಗಳಾಗಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಈ ಕುರಿತು ಅವಲೋಕಿಸುವ ಅನಿವಾರ್ಯತೆಯಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್‍ರವರ ವಿಚಾರಧಾರೆ ಕುರಿತು […]