Tag: #hiriadka temple #supreme court
-
ಹಿರಿಯಡ್ಕ ಶ್ರೀ ವೀರಭದ್ರ ದೇಗುಲ ಆಡಳಿತಾಧಿಕಾರಿ ನೇಮಕ ವಿವಾದ, ಯಥಾಸ್ಥಿತಿ: ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಉಡುಪಿ ಜಿಲ್ಲೆಯ ಹಿರಿಯಡ್ಕದ ಬೊಮ್ಮರಬೆಟ್ಟು ಶ್ರೀ ಮಹತೊಭಾರ ವೀರಭದ್ರ ಸ್ವಾಮಿ ದೇಗುಲದ ಆಡಳಿತಾಧಿಕಾರಿ ನೇಮಕ ವಿವಾದ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ದೇಗುಲದ ಆಡಳಿತ ನಿರ್ವಹಣೆಗೆ ಸಂಬಂಧಿಸಿದ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಆರ್.ಸುಭಾಷ್ ರೆಡ್ಡಿ ಹಾಗೂ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಏನಾಗಿತ್ತು? ದೇಗುಲದ ಆಡಳಿತಕ್ಕೆ ಸಂಬಂಧಸಿದ ವಿವಾದದ ಹಿನ್ನೆಲೆಯಲ್ಲಿ ಆಳ್ವಾ ಹಾಗೂ ಹೆಗ್ಡೆ ಕುಟುಂಬಗಳ ಸದಸ್ಯರು…