ಹಿರಿಯಡಕ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಉಡುಪಿ, ಜುಲೈ 19: ವಿದ್ಯಾರ್ಥಿಗಳು ತಮ್ಮ ಅಮೂಲ್ಯ ವಿದ್ಯಾರ್ಥಿ ಜೀವನವನ್ನು ಅಧ್ಯಯನ ಶೀಲತೆಯ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಸಾಫಲ್ಯ ಟ್ರಸ್ಟ್ ನ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಅವಿಭಜಿತ ದಕ್ಷಣ ಕನ್ನಡ ಜಿಲ್ಲೆಯ ನೂತನ ಸಮಾಜ ಸೇವಾ ಸಂಸ್ಥೆ “ಸಾಫಲ್ಯ ಟ್ರಸ್ಟ್” ವತಿಯಿಂದ ಕೊಡುಗೆಯಾಗಿ ನೀಡಿರುವ ಆಧುನಿಕ “ಶುದ್ಧ ಕುಡಿಯುವ ನೀರಿನ ಘಟಕ”ವನ್ನು ಉದ್ಘಾಟಿಸಿ, ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾಫಲ್ಯ ಟ್ರಸ್ಟ್‍ನ ಕಾರ್ಯದರ್ಶಿ […]
ಹಿರಿಯಡ್ಕ: ಆರೋಗ್ಯವಂತ ಶಿಶು ಪ್ರದರ್ಶನ, ವಿಶ್ವ ಜನಸಂಖ್ಯಾ ದಿನಾಚಾರಣೆ
ಉಡುಪಿ, ಜುಲೈ 17: ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ, ಲಯನ್ಸ ಕ್ಲಬ್ ಹಿರಿಯಡ್ಕ ಹಾಗೂ ಲಯನ್ಸ ಕ್ಲಬ್ ಇಂದ್ರಾಳಿ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಮತ್ತು ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮವು ಬುಧವಾರ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು. ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಕೇಲ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯಡ್ಕ ಲಯನ್ಸ ಕ್ಲಬ್ ಅಧ್ಯಕ್ಷ ಮೋಹನ್‍ದಾಸ್ ಆಚಾರ್ಯ ಮತ್ತು ಇಂದ್ರಾಳಿ ಲಯನ್ಸ ಕ್ಲಬ್ ಅಧ್ಯಕ್ಷ ಹೃಷಿಕೇಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ […]
ಹಿರಿಯಡ್ಕ: ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ
ಉಡುಪಿ, ಜುಲೈ 10: ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ಮೇ/ಜೂನ್ 2019ರ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದೆ. ಕಲಾ ವಿಭಾಗದಲ್ಲಿ ಶೇ.100 ರಷ್ಟು ಫಲಿತಾಂಶ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.88.78 ರಷ್ಟು ಫಲಿತಾಂಶ ಬಂದಿದ್ದು, ಅತಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅತ್ಯುನ್ನತ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. […]
ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯು.ಜಿ.ಸಿ 12ಬಿ ಮಾನ್ಯತೆ
ಉಡುಪಿ, ಜುಲೈ 1: ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜು ಜೂನ್ 25 ರಂದು ಯು.ಜಿ.ಸಿ. ಕಾಯ್ದೆ 1956ರ 12 ಬಿ ಕಲಂ ಅಡಿಯಲ್ಲಿ ಮಾನ್ಯತೆ ಪಡೆದಿದೆ. ಕಾಲೇಜು ಈಗ ಕೇಂದ್ರ ಸರ್ಕಾರದಿಂದ ಬರುವ ಹಣಕಾಸಿನ ನೆರವು ಪಡೆಯಲು ಅರ್ಹವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯಡಕ: ಉಚಿತ ದಂತ ಚಿಕಿತ್ಸಾ ಶಿಬಿರ
ಉಡುಪಿ, ಜುಲೈ 1: ಲಯನ್ಸ್ ಕ್ಲಬ್ ಹಾಗೂ ಮಣಿಪಾಲದ ಕೆ.ಎಂ.ಸಿ. ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರವು ಇತ್ತೀಚೆಗೆ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸೆಕೆಂಡ್ ವೈಸ್ ಲಯನ್ ಡಿಸ್ಟ್ರಿಕ್ಟ್ ಗವರ್ನರ್ ವಿಶ್ವನಾಥ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಉಚಿತ ದಂತ ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಹಿರಿಯಡಕ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನದಾಸ್ ಆಚಾರ್ಯ ಮಾತನಾಡಿ, ಲಯನ್ ಕ್ಲಬ್ ಒಂದು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಸೇವೆ, ಸ್ನೇಹ, ನಾಯಕತ್ವ ಅದರ ಮೂಲತತ್ತ್ವಗಳಾಗಿವೆ […]