ಹಿರಿಯಡಕ : ಆಂಗ್ಲಭಾಷೆ ಕಲಿಕೆಯ ಉಪನ್ಯಾಸ
ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕದಲ್ಲಿ ಮಾರ್ಚ್ 26 ರಂದು ಆಂಗ್ಲಭಾಷಾ ವಿಭಾಗದ ಆಶ್ರಯದಲ್ಲಿ ಆಂಗ್ಲಭಾಷೆಯ ಕಲಿಕೆಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಶಂಕರನಾರಾಯಣ ಮದರ್ ಥೆರೆಸಾ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕ ರಾಮ ಭಟ್ಟ ಮಾತನಾಡಿ, ಪ್ರಮುಖವಾಗಿ ಆಂಗ್ಲಭಾಷೆಯ ಮೇಲಿನ ಭಯವನ್ನು ಹೋಗಲಾಡಿಸಿದರೆ ಆ ಭಾಷೆಯನ್ನು ಸುಲಭವಾಗಿ ಕಲಿಯಬಹುದು ಎಂದು ನುಡಿದರು. ವಿದ್ಯಾರ್ಥಿಗಳಲ್ಲಿ ಆಂಗ್ಲಭಾಷೆಯನ್ನು ಕಲಿಯುವಾಗ ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಗಳು ಮತ್ತು ಅವುಗಳನ್ನು ಎದುರಿಸುವ ರೀತಿಯ ಬಗ್ಗೆ ಮಾತನಾಡಿದರು. ಕಾಲೇಜಿನ […]
ಹಿರಿಯಡಕ : ಕ್ರೀಡೆ ಹಾಗೂ ಶಾರೀರಿಕ ಚಟುವಟಿಕೆಗಳ ಬಗ್ಗೆ ಯುವ ಜನಾಂಗ ದೃಷ್ಟಿಕೋನ- ವಿಶೇಷ ಕಾರ್ಯಕ್ರಮ
ಉಡುಪಿ: ಐಕ್ಯುಎಸಿ ಹಾಗೂ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಿಂದ ಇತ್ತೀಚೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇಲ್ಲಿ ‘ಕ್ರೀಡೆ ಹಾಗೂ ಶಾರೀರಿಕ ಚಟುವಟಿಕೆಗಳ ಬಗ್ಗೆ ಯುವ ಜನಾಂಗ ದೃಷ್ಟಿಕೋನ” ಎಂಬ ವಿಷಯದ ಬಗ್ಗೆ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಮೆಮೋರಿಯಲ್ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಬೋಧಕರಾದ ಜಯಭಾರತಿ ಎ. ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯುವ ಜನರು ಹೆಚ್ಚು […]
ಜ.26: ಹಿರಿಯಡ್ಕ ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ ವಾರ್ಷಿಕೋತ್ಸವ
ಹಿರಿಯಡ್ಕ: ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ (ರಿ.) ಹಿರಿಯಡ್ಕ ಇದರ 27ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜ.26 ರoದು ಕೋಟ್ನಕಟ್ಟೆ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 7.30 ಕ್ಕೆ ಉದ್ಯಮಿ ಬಿ.ರೋಹಿದಾಸ ಪೈ ಇವರಿಂದ ಧ್ವಜಾರೋಹಣ, ಸಂಜೆ 6:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 7:30ಕ್ಕೆ ಸಭಾಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಾಧನಾಶೀಲ ಕೃಷಿಕ ಪ್ರಶಸ್ತಿ ಪುರಸ್ಕೃತ ಕುದಿ ಶ್ರೀನಿವಾಸ್ ಭಟ್ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಕಾರ್ಕಳದ ವಾಗ್ಮಿ ಶ್ರೀಕಾಂತ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ನೃತ್ಯ […]
18 ರಿಂದ 30 ವರ್ಷದ ಯುವಕರು ಕುಡಿತದ ಚಟಕ್ಕೆ ಬಿದ್ದಿರುವ ವ್ಯವಸ್ಥೆ ಬಂದಿದೆ: ಕುದಿ ವಸಂತ್ ಶೆಟ್ಟಿ
ಹಿರಿಯಡಕ : ಅಪ್ಪ, ಅಮ್ಮನ ಜವಾಬ್ದಾರಿ ಮಕ್ಕಳಿಗೆ ಶಿಕ್ಷಣವನ್ನು ಕೊಡುವುದು. ಆ ಶಿಕ್ಷಣವನ್ನು ಸರಿಯಾಗಿ ಕೊಡುವುದರ ಜೊತೆಗೆ ಮಗುವಿಗೆ ತಿಳಿವಳಿಕೆ ಕೊಡುವಂತಹ ವಾತಾವರಣ ಬೇಕು. . 18 ರಿಂದ 30 ವರ್ಷದ ಯುವಕರು ಕುಡಿತದ ಚಟಕ್ಕೆ ಬಿದ್ದಿರುವ ವ್ಯವಸ್ಥೆ ಬಂದಿದೆ ಎಂದರೆ ತಂದೆ ತಾಯಿ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದೇ ಅರ್ಥ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಕುದಿ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ್ ಶೆಟ್ಟಿ ಹೇಳಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ […]