ಹಿರಿಯಡಕ: ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಬಂಧನ
ಹಿರಿಯಡಕ: ದಲಿತ ಬಾಲಕಿಯೊಬ್ಬಳ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಅ.12ರಂದು ಬಂಧಿಸಿದ್ದಾರೆ. ಎರಡು ತಿಂಗಳ ಹಿಂದೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಬಂಧಿತ ಆರೋಪಿಯನ್ನು ಬೈರಂಪಳ್ಳಿಯ ಪ್ರದೀಪ್ ಶೆಟ್ಟಿ(39) ಎಂದು ಗುರುತಿಸಲಾಗಿದೆ. ಈತ ಆ. 24ರಂದು ಮಧ್ಯಾಹ್ನ ವೇಳೆ ಮನೆಯಲ್ಲಿದ್ದ 13 ವರ್ಷ ಪ್ರಾಯದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಈತ ಬಾಲಕಿಯ ಮನೆಯ ಸಮೀಪ ಕೆಲಸ ನಿರ್ವಹಿಸುತ್ತಿದ್ದು, ಇದೇ […]