ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟನೆ
ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ನೂತನ ಕೊಠಡಿಯ ಉದ್ಘಾಟನೆಯನ್ನು ಇಂದು(ಸೆ.11) ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಶಾಸಕರು ಮಾತನಾಡಿ ಇಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಮುಚ್ಚುವ ಸ್ಥಿತಿಗೆ ತಲುಪಿದೆ. ಇಂತಹ ಸಂದರ್ಭದಲ್ಲಿ ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 200 ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಶ್ಲಾಘನೀಯ ಇಂತಹ ಶಾಲೆಗಳ ಅಭಿವೃದ್ಧಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು ಹಾಗೂ ಶಾಲೆಗೆ ಬೇಕಾದ ಸಂಪೂರ್ಣ […]