ಮಾ.17 – ಎ. 2 ರವರೆಗೆ 1500 ವರ್ಷಗಳ ಐತಿಹ್ಯದ ಪೆರ್ಣಂಕಿಲ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು

ಹಿರಿಯಡ್ಕ: ಪೆರ್ಣಂಕಿಲ ಗ್ರಾಮದ ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಸುಮಾರು 1500 ವರ್ಷಗಳ ಐತಿಹ್ಯವಿರುವ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮಾ.17 ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭವಾಗಿ ಎ. 2 ರಂದು ಜಾತ್ರೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ. ಈ ಬಗ್ಗೆ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್ ಪೆರ್ಣಂಕಿಲ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪೇಜಾವರ ಮಠದ ಕೀರ್ತಿಶೇಷ ವಿಶ್ವೇಶತೀರ್ಥ ಶ್ರೀಪಾದರ ಆಶಯದಂತೆ ಅವರ […]

ಹಿರಿಯಡಕ: ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲಾದಲ್ಲಿ ಅಷ್ಟೋತ್ತರಶತ ನಾರಿಕೇಳ ಶ್ರೀ ಮಹಾಗಣಪತಿ ಯಾಗ

ಹಿರಿಯಡಕ: ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲಾದಲ್ಲಿ ಅಷ್ಟೋತ್ತರಶತ ನಾರಿಕೇಳ ಶ್ರೀ ಮಹಾಗಣಪತಿ ಯಾಗ, ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಫೆ.10 ಮತ್ತು11ರಂದು ನಡೆಯಲಿದೆ. ಫೆ. 10 ರಂದು ಬೆಳಗ್ಗೆ 9 ಗಂಟೆಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗುರು ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹವಾಚನ ದೇವನಾಂದಿ, ಕೌತುಕ ಬಂಧನ, ಆಚಾರ್ಯವರಣ, ಸಪ್ತಶತಿ ಪಾರಾಯಣ ದುರ್ಗಾ ಹೋಮ, ಪವಮಾನ ಹೋಮ, ಪಂಚಾಮೃತ ಅಭಿಷೇಕ ನಡೆಯಲಿದೆ. ಸಂಜೆ 4 ಗಂಟೆಗೆ ಮಂಟಪ ಸಮಸ್ಕಾರ, ಪ್ರಧಾನ ಕಲಶ ಪ್ರತಿಷ್ಠೆ, […]

ಶ್ರೀರಾಮ ಭಜನಾ ಮಂಡಳಿ ಭಜನೆಕಟ್ಟೆ ಕೊಂಡಾಡಿ ಸುವರ್ಣ ಮಹೋತ್ಸ ನಿಮಿತ್ತ ನೆನೆದವರ ಮನೆಯಲ್ಲಿ ಭಜನೆ ಕಾರ್ಯಕ್ರಮ

ಹಿರಿಯಡ್ಕ: ಶ್ರೀರಾಮ ಭಜನಾ ಮಂಡಳಿ ಭಜನೆಕಟ್ಟೆ ಕೊಂಡಾಡಿಯ ಸುವರ್ಣ ಮಹೋತ್ಸವದ ಅಂಗವಾಗಿ ‘ನೆನೆದವರ ಮನೆಯಲ್ಲಿ ಭಜನೆ’ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇಮಾರು ಮಠದ ಈಶ ವಿಠ್ಠಲದಾಸ ಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಯಶಸ್ವಿ ಕಾರ್ಯಕ್ರಮವು ಮನೆಮಾತಾಗಿದೆ. ಮದರಂಗಿ, ಹುಟ್ಟುಹಬ್ಬ, ಮದುವೆಯ ವಾರ್ಷಿಕೋತ್ಸವ ಹಾಗೂ ಹಬ್ಬ ಹರಿದಿನಗಳಲ್ಲಿಯೂ ಭಜನೆ ನಡೆಸಿದ್ದು 60ನೇ ದಿನದ ಭಜನೆಯು ಆನಂದ ಶೆಟ್ಟಿ ಕೊಂಡಾಡಿ ಇವರ ಮನೆಯಲ್ಲಿ ನಡೆಯಿತು. ಭಜನೆ ನಡೆದ ಪ್ರತಿ ಮನೆಯವರಿಗೆ ಪುರಂದರದಾಸರ ಒಂದು ಭಜನೆ ಪುಸ್ತಕವನ್ನು ನೀಡಿ ಶ್ರೀ ರಾಮ […]

ಹಿರಿಯಡ್ಕ: ವ್ಯಕ್ತಿ ನಾಪತ್ತೆ

ಹಿರಿಯಡ್ಕ: ಅಂಜಾರು ಗ್ರಾಮದ ಆಳುಗ್ಗೇಲು ಮನೆ ನಿವಾಸಿ ಸಂದೇಶ್ ರಾವ್ (45) ಎಂಬ ವ್ಯಕ್ತಿಯು ನವೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ