ಹಿರಿಯಡಕ: ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿ ನೇಣಿಗೆ ಶರಣು
ಹೆಬ್ರಿ: ಹಿರಿಯಡಕ ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಸಮೀಪದ ಮಾಣಾಯಿ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೃತರನ್ನು ಮಾಣಾಯಿ ನಿವಾಸಿ 57 ವರ್ಷದ ರಘುರಾಮ ಎಂದು ಗುರುತಿಸಲಾಗಿದೆ. ಅವರು ಹಿರಿಯಡಕ ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ರಾತ್ರಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.