ಆಳ್ವಾಸ್ ‘ಜಾಂಬೂರಿ’: ಭಾರತ ದೇಶ ಶ್ರೇಷ್ಟ ಪರಂಪರೆ, ಇತಿಹಾಸ ಹಾಗೂ ಸಂಸ್ಕೃತಿಯಿಂದ ಕೂಡಿದೆ: ಮುಖ್ಯಮಂತ್ರಿ
ಮಂಗಳೂರು: ಸಣ್ಣವಯಸ್ಸಿನಲ್ಲಿ ಚರಿತ್ರೆ ಮತ್ತು ಶಿಸ್ತು ರೂಪಿಸುವ ಸುಸಮಯವಾಗಿದ್ದು, ಚರಿತ್ರೆಯ ಜೊತೆಗೆ ಚಾರಿತ್ರ್ಯ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳೆಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಭಾನುವಾರ ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮ ದಲ್ಲಿ ಮಾತನಾಡಿದರು. ಸಣ್ಣ ವಯಸ್ಸಿನಲ್ಲಿ ಮಕ್ಕಳಲ್ಲಿ ಮೌಲ್ಯ, ಆದರ್ಶಗಳನ್ನು ತುಂಬಿ, ಹಿರಿಯರಿಗೆ ಗೌರವಾದರಗಳನ್ನು ತೋರುವ, ಕಿರಿಯರಿಗೆ ಪ್ರೀತಿಯನ್ನು ತೋರುವ ಗುಣಧರ್ಮವನ್ನು ಇಲ್ಲಿ […]