ಮಂಗಳೂರು: ಹಿಟ್ ಎಂಡ್ ರನ್ ಪ್ರಕರಣಕ್ಕೆ ಯುವತಿ ಬಲಿ; ನಾಲ್ವರಿಗೆ ಗಾಯ
ಮಂಗಳೂರು: ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದ ಕಾರಿನ ಭೀಕರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ನಗರದ ಲೇಡಿ ಹಿಲ್-ಮಣ್ಣಗುಡ್ಡ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತ ಯುವತಿಯನ್ನು ಸುರತ್ಕಲ್ ಬಾಳದ ರೂಪಶ್ರೀ (23) ಎಂದು ಗುರುತ್ತಿಸಲಾಗಿದೆ. ಸ್ವಾತಿ(26) ಹಿತಾನ್ವಿ(16), ಕೃತಿಕಾ(16), ಯತಿಕಾ(12) ಗಂಭೀರ ಗಾಯಗೊಂಡ ಇತರ ನಾಲ್ವರು ಯುವತಿಯರಾಗಿದ್ದು ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ಅಪರಾಹ್ನ […]