ಹೆಚ್.ಐ.ವಿ ರೋಗದ ಶ್ರೀಘ್ರ ತಪಾಸಣೆಯಿಂದ ಚಿಕಿತ್ಸೆ ಸಾಧ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಹೆಚ್.ಐ.ವಿ/ಏಡ್ಸ್ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಸಿ, ಶೀಘ್ರದಲ್ಲಿ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸುವುದರಿಂದ ರೋಗ ಹರಡುವುದನ್ನು ತಡೆಯಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಗುರುವಾರ ನಗರದ ಮಿನಿ ಟೌನ್ ಹಾಲ್‌ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ […]