ಒಲಿಂಪಿಕ್ಸ್ ಹಾಕಿ: ಸ್ಪೇನ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವು ಎರಡನೇ ಜಯ ಗಳಿಸಿದೆ. 3-0 ಅಂತರದಿಂದ ಸ್ಪೇನ್ ತಂಡವನ್ನು ಮಣಿಸುವ ಮೂಲಕ ಒಲಿಂಪಿಕ್ಸ್‌ನಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಂಡಿದ್ದ ಭಾರತ ತಂಡವು ಮಂಗಳವಾರದ ಪಂದ್ಯದಲ್ಲಿ ಮತ್ತೆ ಪುಟಿದೆದ್ದಿದೆ. ‘ಎ’ ಗುಂಪಿನ ಪಂದ್ಯದಲ್ಲಿ ವಿಶ್ವದ ನಂ. 9 ಸ್ಪೇನ್ ವಿರುದ್ಧ ಗೆಲುವು ದಾಖಲಿಸುವಲ್ಲಿ ಸಿಮ್ರನ್‌ಜೀತ್ ಸಿಂಗ್ ಮತ್ತು ರೂಪೀಂದರ್ ಪಾಲ್ ಸಿಂಗ್ ಮಹತ್ತರ ಪಾತ್ರ ವಹಿಸಿದರು. ಕ್ರೀಡಾಕೂಟದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ […]