ಉಡುಪಿಯಲ್ಲಿ ಮಳೆಯಬ್ಬರ: ಆ.9ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.9 ರಂದು ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ, ಪಿಯು ಮತ್ತು ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.