ಜಿಲ್ಲೆಯಲ್ಲಿ ಮುಂದುವರೆದ ಮಳೆ: ನಾಳೆ(ಜು.27) ಕೂಡ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ನಾಳೆ ಎಲ್ಲೊ ಅಲರ್ಟ್ ಘೋಷಿಸದ್ದು, ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.27 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.