ನಾಳೆ (ಜು.26) ದ.ಕ. ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜುಲೈ 26 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚರಿಕಾ ಕ್ರಮವಾಗಿ ಬುಧವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು, ಕಾಲೇಜು, ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗ್ರಾಮೀಣ ಹಾಗೂ ದೂರದ ಊರುಗಳಿಂದ ಬರುವ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾರ್ಥಿಗಳು ಅವಕಾಶ […]