ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆ: ನಾಳೆ (ಜು.6) ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲಾಧ್ಯಂತ ಕಳೆದ ಮೂರು ದಿನದಿಂದ ಭಾರೀ ಮಳೆಯಾಗಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ, ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.