ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್: ಜುಲೈ 8-9 ರಂದು ಶಾಲಾ-ಕಾಲೇಜುಗಳಿಗೆ ರಜೆ
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಎರಡು ದಿನ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅತ್ಯಾಧಿಕ ಮಳೆಯಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಅಂಗನವಾಡಿ ಕೇಂದ್ರ, ಪದವಿ ಮತ್ತು ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ- 8 ಮತ್ತು 9 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗೆ ಟೋಲ್ ಫ್ರೀ ನಂಬರ್ 1077 ಅಥವಾ 080-2574802 […]
ಸಾಮಾಜಿಕ ಜಾಲತಾಣದಲ್ಲಿ ರಜೆ ಬಗ್ಗೆ ಸುಳ್ಳು ಸುದ್ದಿ: ಜಿಲ್ಲಾಡಳಿತದಿಂದ ಸೈಬರ್ ಠಾಣೆಯಲ್ಲಿ ದೂರು ದಾಖಲು
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಗೆ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ, ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತವು ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ […]
ಭಾರೀ ಮಳೆ: ಅಗತ್ಯವಿರುವೆಡೆ ಶಾಲೆಗಳಿಗೆ ರಜೆ ಸಾರಲು ಉಡುಪಿ ಜಿಲ್ಲಾಧಿಕಾರಿ ಸೂಚನೆ
ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದ್ದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ. ಆದರೆ ಅಗತ್ಯ ಇರುವಲ್ಲಿ ಆಯಾ ಶಾಲಾ ಹಂತದಲ್ಲೇ ರಜೆ ಸಾರಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ. ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ.
ಧಾರಾಕಾರ ಮಳೆ: ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ
ಮಂಗಳೂರು:- ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.
ಲೋಕಸಭಾ ಚುನಾವಣೆ: ಏ. 18 ಮತ್ತು 23 ರಂದು ಸಾರ್ವತ್ರಿಕ ರಜೆ
ಉಡುಪಿ: ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2019 ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ರಂದು ಮತ್ತು ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಏಪ್ರಿಲ್ 23 ರಂದು ಚುನಾವಣೆ ನಡೆಯಲಿರುತ್ತದೆ. ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಚುನಾವಣೆ ನಡೆಯುವ […]