ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

ಉಡುಪಿ: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ (ಮೊಂಡಿ ಥರ್ಸ್‌ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು. ಧರ್ಮ ಪಾಂತ್ಯದ ಪ್ರಧಾನ ಧಾರ್ಮಿಕ ಕಾರ‍್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಡಾ.ಜೆರಾಲ್ಡ್‌ ಐಸಾಕ್‌ ಲೋಬೊ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರುಗಳಾದ ವಂ ಕೆನ್ಯೂಟ್ […]