ಪ್ರತಿಫಲಾಪೇಕ್ಷೆಯಿಲ್ಲದೆ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುವವರು ಗೃಹರಕ್ಷಕ ದಳ ಸಿಬ್ಬಂದಿಗಳು: ವಸಂತ ಕುಮಾರ್
ಉಡುಪಿ: ಗೃಹ ರಕ್ಷಕದಳದ ಸಿಬ್ಬಂದಿಗಳು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಸ್ವ-ಇಚ್ಚೆ ಹಾಗೂ ಪ್ರಾಮಾಣಿಕತೆಯಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹೆಚ್.ಎಂ ವಸಂತ ಕುಮಾರ್ ಹೇಳಿದರು. ಅವರು ಶನಿವಾರ ಜಿಲ್ಲಾ ಗೃಹ ರಕ್ಷಕದಳ ಉಡುಪಿ ಇವರ ವತಿಯಿಂದ, ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ನಡೆದ ಅಖಿಲ ಭಾರತ ಗೃಹ ರಕ್ಷಕದಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗೃಹ ರಕ್ಷಕ ದಳದ ಸಿಬ್ಬಂದಿಗಳು ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಆರ್.ಟಿ.ಓ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ವಿವಿಧ […]
ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರ ಹುದ್ದೆ ಖಾಲಿ
ಉಡುಪಿ: ಉಡುಪಿ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿದ 19 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಘಟಕದ ರಾಘವೇಂದ್ರ ಮೊ.ನಂ: 9449469838, ಕುಂದಾಪುರ ಘಟಕದ ಭಾಸ್ಕರ್ ಮೊ.ನಂ: 9242126368, ಬ್ರಹ್ಮಾವರ ಘಟಕದ ಸ್ಟೀವನ್ ಪ್ರಕಾಶ್ ಮೊ.ನಂ: 9731897356, ಕಾರ್ಕಳ ಘಟಕದ […]