ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿದ್ದೇನು.?
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದ್ದೇ ಆದರೆ, ರಾಷ್ಟ್ರಪತಿ ಆಡಳಿತ ಹೇರಿ ಎಂಬ ಬೇಡಿಕೆ ಇಡುವುದಕ್ಕೆ ಬಿಜೆಪಿಗೆ ಎಲ್ಲಾ ಅಧಿಕಾರ ಇದೆ ಎಂದು ಅಮಿತ್ ಶಾ ಹೇಳಿದ್ದಾರೆ. ಶನಿವಾರ ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯಾಗಲಿದ್ದು, ನಾವು ರಚನೆ ಮಾಡಲಿದ್ದೇವೆ ಎಂಬ ವಿಶ್ವಾಸವ್ಯಕ್ತಪಡಿಸಿದರು.