ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕಳೆದ ಮೂರ್ನಾಲ್ಕು ದಿನಗಳಿಂದ ಮೈ-ಕೈ ನೋವು, ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಧ್ಯಾಹ್ನ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್ ಶಾ ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಏಮ್ಸ್ ಆಸ್ಪತ್ರೆಯ ಪೋಸ್ಟ್ ಕೋವಿಡ್ ಕೇರ್ ಗೆ ದಾಖಲಿಸಿಕೊಳ್ಳಲಾಗಿದೆ. ಅವರು ಆರೋಗ್ಯವಾಗಿದ್ದು, ಆಸ್ಪತ್ರೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.