ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ ಪ್ರಕರಣ: ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ- ಬೊಮ್ಮಾಯಿ

ಉಡುಪಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪಿತಸ್ಥರಿದ್ದರು ನಾವು ನ್ಯಾಯಸಮ್ಮತ ತನಿಖೆ ಮಾಡುತ್ತೇವೆ. ಇದನ್ನು ಮೊದಲ ದಿನದಿಂದಲೇ ಹೇಳಿದ್ದೇನೆ. ಅಲ್ಲದೆ ಯಾವುದೇ ಸಂಘಟನೆ, ವ್ಯಕ್ತಿಯ ಬಗ್ಗೆ ಉಲ್ಲೇಖ ಮಾಡಿಲ್ಲ ಎಂದರು. ಪೊಲೀಸರು ಮೊದಲನೆ ದಿನದಿಂದ ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧಾರಿಸಿ ತೀವ್ರವಾದ ತನಿಖೆ ನಡೆಸಿದ ಪರಿಣಾಮ ಆರೋಪಿ ಶರಣಾಗಿದ್ದಾನೆ. […]