ಕೆ.ಜಿ.ಹಳ್ಳಿ ಗಲಭೆ: ದುಷ್ಕರ್ಮಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರ ಸೂಚನೆ
ಉಡುಪಿ: ಬೆಂಗಳೂರಿನ ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ಗಲಭೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಚಿವರು, ಗಲಭೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಕಾನೂನು ಕೈಗೆತ್ತಿಕೊಂಡವರು ಎಷ್ಟೆ ದೊಡ್ಡವರಾದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚಿಸಲಾಗಿದೆ. […]