ಪೊಲೀಸ್ ಠಾಣೆಗಳನ್ನು ಬಲಪಡಿಸುವ ಕಾರ್ಯಕ್ಕೆ ಸರ್ಕಾರ ಸಿದ್ಧ: ಬೊಮ್ಮಾಯಿ

ಕುಂದಾಪುರ: ಪೊಲೀಸರು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಪೊಲೀಸರ ಸ್ಥಿತಿಗತಿಗಳನ್ನು ಸುಧಾರಣೆ ಮಾಡಿ, ಅವರ ಸೇವೆಗಳನ್ನು ಉತ್ತಮಗೊಳಿಸುವ ಮತ್ತು ಪೊಲೀಸರು ಕರ್ತವ್ಯ ನಿರ್ವಹಿಸುವ ಪೊಲೀಸ್ ಠಾಣೆಗಳನ್ನು ಬಲಪಡಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದ್ದು, ಪೊಲೀಸ್ ವ್ಯವಸ್ಥೆ ಬದಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಉಡುಪಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಶುಕ್ರವಾರ ಬೈಂದೂರು ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಅಪರಾಧವನ್ನು ಕ್ಲಪ್ತ ಸಮಯದಲ್ಲಿ ಭೇದಿಸುವ ಹೊಸ ವ್ಯವಸ್ಥೆಯನ್ನು ಪರಿಚಯಿಸುವ […]