ಐಪಿಸಿ, ಸಿ.ಆರ್.ಪಿ. ಸಿ ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್ ಬದಲಾವಣೆ: ಲೋಕಸಭೆಯಲ್ಲಿ ಮಸೂದೆ ಪರಿಚಯಿಸಿದ ಕೇಂದ್ರ

ನವದೆಹಲಿ: ಭಾರತೀಯ ದಂಡ ಸಂಹಿತೆ (IPC), ಅಪರಾಧ ಪ್ರಕ್ರಿಯಾ ಸಂಹಿತೆ (CrPC) ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ (Evidence Act)ಯನ್ನು  ಬದಲಿಸಲು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕೆಳಗಿನ ಮಸೂದೆಗಳನ್ನು ಮಂಡಿಸಿದರು ಭಾರತೀಯ ನ್ಯಾಯ ಸಂಹಿತಾ, 2023 (ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಕ್ರೋಢೀಕರಿಸಲು ಮತ್ತು ತಿದ್ದುಪಡಿ ಮಾಡಲು ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದರ ಪ್ರಾಸಂಗಿಕ ವಿಷಯಗಳಿಗೆ) ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, […]

ನೂತನ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಹೆಜಮಾಡಿಯಲ್ಲಿ ಅದ್ಧೂರಿ ಸ್ವಾಗತ

ಪಡುಬಿದ್ರೆ: ಕರ್ನಾಟಕ ಸರ್ಕಾರದ ನೂತನ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಮಂಗಳವಾರ ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನೂತನ ಗೃಹ ಸಚಿವರಾದ ನಂತರ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಸಚಿವರನ್ನು ಹೆಜಮಾಡಿ ಟೋಲ್ ಗೇಟ್ ಹತ್ತಿರ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಎಸ್. ಸುವರ್ಣ, ನವೀನ್ ಚಂದ್ರ ಜೆ ಶೆಟ್ಟಿ, […]

ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣ: ಸೂಕ್ತ ಕಾನೂನು ರಚಿಸುವಂತೆ ಗೃಹಸಚಿವರಿಗೆ ಹಿಂಜಾವೇ ಮನವಿ

ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್​ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ರೂಪಿಸುವ ಕುರಿತು ಹಿಂದುಪರ ಸಂಘಟನೆಗಳ ನಿಯೋಗವು ದೂರು ಸಲ್ಲಿಸಿ, ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಸ್ಪಂದಿಸಿದ ಸಚಿವರು ಪೊಲೀಸ್ ದಳ ರಚಿಸುವ ಕುರಿತಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಜಯಮಹಲ್ ನ ಗೃಹ ಸಚಿವರ ಅಧಿಕೃತ ನಿವಾಸದಲ್ಲಿ ಹಿಂದೂ ಜಾಗರಣ ವೇದಿಕೆಯ ಸದಸ್ಯರು […]

ಪಿ.ಎಫ್.ಐ ತಕ್ಷಣ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ರೆಹಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಅದರ ಸಹವರ್ತಿ ಸಂಸ್ಥೆಗಳನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ)ಕಾಯಿದೆ, ಅಡಿಯಲ್ಲಿ ಐದು ವರ್ಷಗಳ ಕಾಲ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪಿಎಫ್‌ಐ ಕಾರ್ಯಕರ್ತ ನಾಸೀರ್ ಪಾಷಾ ಎಂಬವರು ಪತ್ನಿ ಮೂಲಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ […]

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಪಾಂಡಿಚೆರಿ ಗೃಹಮಂತ್ರಿ ಎ.ನಮಶಿವಯಮ್

ಉಡುಪಿ: ಪಾಂಡಿಚೆರಿಯ ಗೃಹಮಂತ್ರಿಗಳಾದ ಎ.ನಮಶಿವಯಮ್ ತಮ್ಮ ಕುಟುಂಬ ಸಮೇತರಾಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.