ಸಾರ್ವಜನಿಕ ಆಸ್ತಿಪಾಸ್ತಿಗೆ ಆದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಆದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಲಭೆ, ಪ್ರತಿಭಟನೆ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಆಗುವ ನಷ್ಟವನ್ನು‌ ಮಾಡುವವರಿಂದಲೇ ಭರಿಸಬೇಕೆಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಅದರಂತೆ ಕರ್ನಾಟಕ ಸರ್ಕಾರವೂ ಕಾರ್ಯನಿರ್ವಹಿಸಲಿದೆ’ ಎಂದರು. ನಿನ್ನೆಯ ಗಲಭೆ ವೇಳೆ ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿದವರನ್ನು ಸಿಸಿಟಿವಿ ಫೂಟೇಜ್ ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳ […]