ಯುಎಪಿಎ ಅಧಿಕಾರ ಚಲಾಯಿಸಿ ಪಿಎಫ್‌ಐ ನಿಗ್ರಹಿಸಿ: ರಾಜ್ಯಗಳಿಗೆ ಕೇಂದ್ರದ ನಿರ್ದೇಶನ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಮತ್ತು ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘಗಳೆಂದು ಘೋಷಿಸಿದ ನಂತರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ(ಯುಎಪಿಎ), 1967 ರ ಅಧಿಕಾರವನ್ನು ಅವುಗಳ ವಿರುದ್ಧ ಚಲಾಯಿಸಲು ಕೇಂದ್ರ ಸರ್ಕಾರವು ನಿರ್ದೇಶನ ನೀಡಿದೆ. ನಿನ್ನೆ ಹೊರಡಿಸಿದ ಅಧಿಸೂಚನೆಯಲ್ಲಿ, ಕೇಂದ್ರ ಸರ್ಕಾರವು ಪಿಎಫ್‌ಐ, ಅದರ ಸಹವರ್ತಿಗಳು ಮತ್ತು ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಘೋಷಿಸಿದೆ. ಪಿಎಫ್‌ಐ ಮತ್ತು ಸಂಬಂಧಿತ […]

ಪದ್ಮ ಪ್ರಶಸ್ತಿ 2023ರ ನಾಮನಿರ್ದೇಶನ: ಸೆಪ್ಟೆಂಬರ್ 15 ರವರೆಗೆ ಅವಕಾಶ

ನವದೆಹಲಿ: ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ಔಷಧ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳಿಗಾಗಿ ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ವ್ಯತ್ಯಾಸವಿಲ್ಲದೆ ನೀಡಲಾಗುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿರುವ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕಾರಗಳಿಗೆ ನಾಮನಿರ್ದೇಶನ ಸಲ್ಲಿಸುವ ಅವಕಾಶವನ್ನು ಈ ತಿಂಗಳ 15 ರವರೆಗೆ ತೆರೆದಿಡಲಾಗಿರುತ್ತದೆ. ಪದ್ಮ ಪ್ರಶಸ್ತಿ- 2023ರ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು […]

ಭಾರತೀಯ ಮಹಿಳೆಯರ ವಿರುದ್ದ ದಿನಕ್ಕೆ ಸರಾಸರಿ 86 ಅತ್ಯಾಚಾರ, ಗಂಟೆಗೆ 49 ಅಪರಾಧ ಪ್ರಕರಣ: ಎನ್‌ಸಿಆರ್‌ಬಿ ವರದಿ

ನವದೆಹಲಿ: ಇತ್ತೀಚಿನ ಸರ್ಕಾರಿ ವರದಿಯ ಪ್ರಕಾರ 2021 ರಲ್ಲಿ ಭಾರತದಲ್ಲಿ 31,677 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮಹಿಳೆಯರ ವಿರುದ್ದ ದಿನಕ್ಕೆ ಸರಾಸರಿ 86 ಅತ್ಯಾಚಾರ ಪ್ರಕರಣ ಹಾಗೂ ಗಂಟೆಗೆ ಸುಮಾರು 49 ಅಪರಾಧ ಪ್ರಕರಣಗಳು ನಡೆಯುತ್ತವೆ. 2020 ರಲ್ಲಿ ಮಹಿಳೆಯರ ಅತ್ಯಾಚಾರ ಪ್ರಕರಣಗಳ ಸಂಖ್ಯೆ 28,046 ಆಗಿದ್ದರೆ, 2019 ರಲ್ಲಿ ಇದು 32,033 ಆಗಿತ್ತು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಕಚೇರಿಯ ‘ಕ್ರೈಮ್ ಇನ್ ಇಂಡಿಯಾ 2021’ ವರದಿ ತೋರಿಸಿದೆ. ಎನ್‌ಸಿಆರ್‌ಬಿ ಯು ಗೃಹ ಸಚಿವಾಲಯದ ಅಡಿಯಲ್ಲಿ […]

ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ ನಲ್ಲಿ10% ಖಾಲಿ ಹುದ್ದೆಗಳನ್ನು ಅಗ್ನಿವೀರರಿಗೆ ಕಾಯ್ದಿರಿಸಲಾಗುವುದು: ಅಮಿತ್ ಶಾ

ನವದೆಹಲಿ: ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಸೇನೆಯಲ್ಲಿ ನಾಲ್ಕು ವರ್ಷಗಳ ಅಗ್ನಿವೀರ್ ಸೇವೆ ಸಲ್ಲಿಸಿ ವಾಪಾಸಾಗುವವರ ಉದ್ಯೋಗ ಭದ್ರತೆಯ ದೃಷ್ಟಿಯಿಂದ ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ ನೇಮಕಾತಿಯಲ್ಲಿ 10% ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ಕೇಂದ್ರ ಗೃಹ ಸಚಿವಾಲಯವು ನಿರ್ಧರಿಸಿದೆ. ಈ ಎರಡು ಪಡೆಗಳಲ್ಲಿನ ನೇಮಕಾತಿಗಾಗಿ ಅಗ್ನಿವೀರ್‌ಗಳ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅಗ್ನಿವೀರ್‌ನ ಮೊದಲನೆ ಬ್ಯಾಚ್‌ಗೆ, ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 5 ವರ್ಷಗಳವರೆಗೆ ವಯಸ್ಸಿನ ಸಡಿಲಿಕೆ ಇರುತ್ತದೆ ಎಂದು ಕೇಂದ್ರ […]