ಪ್ರೀತಿಗೆ ಮನೆಯವರ ವಿರೋಧ: ಮನನೊಂದ ಯುವತಿ ನೇಣಿಗೆ ಶರಣು

ಕಡಬ: ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಮನೆಯವರು ಒಪ್ಪದ ಕಾರಣಕ್ಕಾಗಿ ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದ ಪುತ್ತಿಲ ಬರೆತ್ತಡಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಪುತ್ತಿಲ ಬರೆತ್ತಡಿ ನಿವಾಸಿ ಕೊರಗಪ್ಪ ಗೌಡ ಎಂಬವರ ಪುತ್ರಿ ರಮ್ಯ (23) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಪಕ್ಕದ ಮನೆಯ ಮಹೇಶ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ರಮ್ಯ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದು ಆತ್ಮ‌ಹತ್ಯೆ ಮಾಡಿಕೊಂಡಿದ್ದಾಳೆ. […]