ಹನಿ ನೀರಾವರಿ- ಪಾಲಿ ಹೌಸ್ ಯೋಜನೆ: ಅರ್ಜಿ ಆಹ್ವಾನ
ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ಪರಿಶಿಷ್ಟ ವರ್ಗದ ಜನಾಂಗದವರಿಗೆ ಹನಿ ನೀರಾವರಿ ಮತ್ತು ಪಾಲಿ ಹೌಸ್ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಪರಿಶಿಷ್ಟ ವರ್ಗದ ಕೃಷಿಕರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಐ.ಟಿ.ಡಿ.ಪಿ ಉಡುಪಿ ಕಚೇರಿ ದೂರವಾಣಿ ಸಂಖ್ಯೆ 0820 2574 814 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.