ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರಿಗೆ ಕರ್ನಾಟಕ ಜಾನಪದ ವಿವಿ ಗೌರವ ಡಾಕ್ಟರೇಟ್ ಪ್ರದಾನ

ಉಡುಪಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಕೊಡ ಮಾಡುವ 2022 ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಯನ್ನು ಉಡುಪಿಯ ಪ್ರಸಿದ್ಧ ಸಾಂಸ್ಕೃತಿಕ ಮುಂದಾಳು, ಉದ್ಯಮಿ ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರಿಗೆ ಗುರುವಾರದಂದು ಪ್ರದಾನ ಮಾಡಲಾಯಿತು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ವಿಶ್ವವಿದ್ಯಾಲಯದ 6 ಮತ್ತು 7ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪದವಿಯನ್ನು ಪ್ರದಾನ ಮಾಡಿದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಟಿ.ಎಂ.ಭಾಸ್ಕರ್ ಅವರು ಈ ಪ್ರತಿಷ್ಠಿತ ಗೌರವವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮೂಡಬಿದ್ರೆ […]